Tel: 7676775624 | Mail: info@yellowandred.in

Language: EN KAN

    Follow us :


ಮೃತ ಹನುಮಂತು ಕುಟುಂಬಕ್ಕೆ ೦೫ ಲಕ್ಷ ರೂ ಚೆಕ್ ನೀಡಿದ ಎಚ್ಡಿಕೆ

Posted Date: 22 Apr, 2020

ಮೃತ ಹನುಮಂತು ಕುಟುಂಬಕ್ಕೆ ೦೫ ಲಕ್ಷ ರೂ ಚೆಕ್ ನೀಡಿದ ಎಚ್ಡಿಕೆ

ಕನಕಪುರ:ಏ/೨೨/೨೦/ಬುಧವಾರ. ನೆನ್ನೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ರಾಮನಗರ ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದರು.


ಇದೇ ವೇಳೆ ಮೃತ ಪತ್ರಕರ್ತ ಹನುಮಂತು ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು. ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ ಹೋಬಳಿಯ ಹನುಮಂತು  ಸ್ವಗ್ರಾಮ ಪಡುವಣಗೆರೆಗೆ ಭೇಟಿ ನೀಡಿದ ಅವರು  ಕುಟುಂಬದ ಸದಸ್ಯರು ಹಾಗು ಹನುಮಂತು ಪತ್ನಿಗೆ  ಧೈರ್ಯ ತುಂಬಿದರು.


ಹನುಮಂತು ಕ್ರಿಯಾಶೀಲ ವ್ಯಕ್ತಿ, ಇಷ್ಟು ಸಣ್ಣ ವಯಸ್ಸಿನಲ್ಲಿ ಅವರು ಸಾವನ್ನಪ್ಪಿದ್ದು ನಮಗೆಲ್ಲರಿಗೂ ನೋವು ಉಂಟು ಮಾಡಿದೆ. ನಿಮ್ಮ ಕುಟುಂಬದ ಜೊತೆಯಲ್ಲಿ ನಾವು ಸದಾಕಾಲ ಇರುತ್ತೇವೆ. ನಿಮ್ಮ ಮಗುವಿನ ವಿದ್ಯಾಭ್ಯಾಸ ಹಾಗೂ ಅದರ ಪೂರ್ಣ ನಿರ್ವಹಣೆಯ ಹೊಣೆ ನಮ್ಮದು. ಅದಕ್ಕೆ ಪ್ರತ್ಯೇಕವಾದ ಒಂದು ವ್ಯವಸ್ಥೆಯನ್ನು ಮಾಡುವುದಾಗಿ ಅವರು ಹೇಳಿದ್ದಾರೆ.

ನನ್ನ ರೀತಿಯಲ್ಲಿಯೇ ಬೇರೆಯವರೂ ಸಹ ನಿಮ್ಮ ಕುಟುಂಬಕ್ಕೆ ಧನ ಸಹಾಯ ನೀಡಲು ಘೋಷಣೆ ಮಾಡಿದ್ದಾರೆ. ಬರುವ ಹಣವನ್ನು ಯಾರನ್ನೂ ನಂಬದೇ ಸೂಕ್ತ ರೀತಿಯಲ್ಲಿ ಅದರ ಸದ್ಬಳಕೆಯನ್ನು ಮಾಡಿಕೊಳ್ಳಲು ಸಲಹೆ ನೀಡಿದರು.


ನಾನು ಸರ್ಕಾರದ ಜೊತೆಯಲ್ಲಿಯೂ ಮಾತನಾಡಿ ಮತ್ತಷ್ಟು ಧನ ಸಹಾಯ ಒದಗಿ ಬರುವಂತೆ ಮಾಡುತ್ತೇನೆ. ನೀವು ಧೈರ್ಯಗೆಡದೆ, ಬದುಕನ್ನು ಸಾಗಿಸಿಕೊಂಡು ಹೋಗಿ ಎಂದು ಧೈರ್ಯ ತುಂಬಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಚರ್ಮ ಕುಶಲ ಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
ಚರ್ಮ ಕುಶಲ ಕರ್ಮಿಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಬೆಂಗಳೂರು:ಮೇ/೦೮/೨೦/ಶುಕ್ರವಾರ. ಕೊರೊನಾ (ಕೋವಿಡ್-೧೯) ರ ಪರಿಣಾಮ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಸ್ತೆ ಬದಿಯಲ್ಲಿ ಚರ್ಮ

ಕೊರೊನಾ (ಕೋವಿಡ್-೧೯) ದಿಂದಾಗಿ ನಷ್ಟ ಅನುಭವಿಸಿದವರಿಗೆ ೧,೬೧೦ ಕೋಟಿ ರೂ ಪರಿಹಾರ ಘೋಷಿಸಿದ ಸರ್ಕಾರ
ಕೊರೊನಾ (ಕೋವಿಡ್-೧೯) ದಿಂದಾಗಿ ನಷ್ಟ ಅನುಭವಿಸಿದವರಿಗೆ ೧,೬೧೦ ಕೋಟಿ ರೂ ಪರಿಹಾರ ಘೋಷಿಸಿದ ಸರ್ಕಾರ

ಕಳೆದ ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ನ ಪರಿಣಾಮವಾಗಿ ವಿವಿಧ ನಿರ್ಬಂಧಗಳನ್ನು ಹೇರಿರುವುದರಿಂದ ಎಲ್ಲಾ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟವನ್ನು ಅನುಭವಿಸುತ್ತಾರೆ.


ಲಾಕ

ವಲಸೆ ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ: ಇನ್ನೂ ಎರಡು ದಿನ ವಿಸ್ತರಿಸಿದ ಮುಖ್ಯಮಂತ್ರಿ
ವಲಸೆ ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ: ಇನ್ನೂ ಎರಡು ದಿನ ವಿಸ್ತರಿಸಿದ ಮುಖ್ಯಮಂತ್ರಿ

ಬೆಂಗಳೂರು:ಮೇ/೦೪/೨೦/ಸೋಮವಾರ. ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು, ಅದನ್ನು ಇನ್ನು ಎರಡು

ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಆನ್‌ಲೈನ್ ತರಗತಿಗಳು ಪ್ರಾರಂಭ ಡಾ ವಿಜಯ ಪ್ರಕಾಶ
ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಆನ್‌ಲೈನ್ ತರಗತಿಗಳು ಪ್ರಾರಂಭ ಡಾ ವಿಜಯ ಪ್ರಕಾಶ

ರಾಮನಗರ:ಮೇ/೦೩/೨೦/ಭಾನುವಾರ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ೨೦೧೯-೨೦ ನೇ ಶೈಕ್ಷಣಿಕ ಸಾಲಿನ ಜುಲೈ ಮತ್ತು ಜನವರಿ ಆವೃತ್ತಿಯಲ್ಲಿ

ಮೃತ ಹನುಮಂತು ಕುಟುಂಬಕ್ಕೆ ೦೫ ಲಕ್ಷ ರೂ ಚೆಕ್ ನೀಡಿದ ಎಚ್ಡಿಕೆ
ಮೃತ ಹನುಮಂತು ಕುಟುಂಬಕ್ಕೆ ೦೫ ಲಕ್ಷ ರೂ ಚೆಕ್ ನೀಡಿದ ಎಚ್ಡಿಕೆ

ಕನಕಪುರ:ಏ/೨೨/೨೦/ಬುಧವಾರ. ನೆನ್ನೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ರಾಮನಗರ ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯ

ಕಾರಿನಲ್ಲಿ ಮದ್ಯ ಸಾಗಣೆ ಚನ್ನಪಟ್ಟಣ ಮಾಕಳಿ ಗ್ರಾಮದ ಮೂವರ ಬಂಧನ
ಕಾರಿನಲ್ಲಿ ಮದ್ಯ ಸಾಗಣೆ ಚನ್ನಪಟ್ಟಣ ಮಾಕಳಿ ಗ್ರಾಮದ ಮೂವರ ಬಂಧನ

ನಾಗಮಂಗಲ:೨೨/೨೦/ಬುಧವಾರ. ಚಾಮರಾಜನಗರ- ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ನಾಗಮಂಗಲ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಎದುರಿನ ಚೆಕ್ ಪೋಸ್ಟ್ ನಲ್

ಕಾರ್ಮಿಕರ ವೇತನ ಕಡಿತಕ್ಕೆ ಅವಕಾಶ ನೀಡುವುದಿಲ್ಲ : ಕಾರ್ಮಿಕ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್
ಕಾರ್ಮಿಕರ ವೇತನ ಕಡಿತಕ್ಕೆ ಅವಕಾಶ ನೀಡುವುದಿಲ್ಲ : ಕಾರ್ಮಿಕ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ್

ಬೆಂಗಳೂರು:ಏ/೧೯/೨೦/ಭಾನುವಾರ. ಕಾರ್ಮಿಕರದ್ದಾಗಲೀ ಅಥವಾ ಇತರೆ ಯಾವುದೇ ಕಾರ್ಮಿಕರದ್ದಾಗಲೀ ವೇತನ ಕಡಿತಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವುದಿಲ್ಲ

ರಾಜ್ಯದಲ್ಲಿನ ಕೊರೊನಾ‌ ಸ್ಥಿತಿಗತಿಯ ಕುರಿತಂತೆ ಸಚಿವ ಸುರೇಶ್ ಕುಮಾರ್‌‌ ಮಾಹಿತಿ
ರಾಜ್ಯದಲ್ಲಿನ ಕೊರೊನಾ‌ ಸ್ಥಿತಿಗತಿಯ ಕುರಿತಂತೆ ಸಚಿವ ಸುರೇಶ್ ಕುಮಾರ್‌‌ ಮಾಹಿತಿ

ಇದುವರೆಗೆ ರಾಜ್ಯದಲ್ಲಿ ಒಟ್ಟಾರೆ ೩೫೯ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ ೦೫:೦೦ ರ ಮಾಹಿತಿಯಂತೆ ೧೩ ಜನ ಸಾವನ್ನಪ್ಪಿದ್ದು, ೮೮ ಮಂದಿ ಗುಣಮುಖರಾಗಿ ಹಿಂತಿರುಗಿದ್ದಾರೆಂದು‌ ಸಚಿವರು ವಿವರ

ಹತ್ತನೇ ತರಗತಿ ಹೊರತುಪಡಿಸಿ ಒಂಭತ್ತನೆಯ ತರಗತಿಯ ತನಕ ಎಲ್ಲರೂ ಪಾಸು ಸುರೇಶ್ ಕುಮಾರ್
ಹತ್ತನೇ ತರಗತಿ ಹೊರತುಪಡಿಸಿ ಒಂಭತ್ತನೆಯ ತರಗತಿಯ ತನಕ ಎಲ್ಲರೂ ಪಾಸು ಸುರೇಶ್ ಕುಮಾರ್

ಬೆಂಗಳೂರು/ರಾಮನಗರ/೦೨/೨೦/ಗುರುವಾರ. ೨೦೧೯/೨೦ ನೇ ಶೈಕ್ಷಣಿಕ ಸಾಲಿನ ೭, ೮ ಮತ್ತು ೯ ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಉತ್ತೀರ್

ನಾವೂ ಹೊರಹೋಗಲ್ಲ, ನೀವು ಬರಬೇಡಿ. ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಿದ ಕೆಲವು ಗ್ರಾಮಸ್ಥರು
ನಾವೂ ಹೊರಹೋಗಲ್ಲ, ನೀವು ಬರಬೇಡಿ. ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಿದ ಕೆಲವು ಗ್ರಾಮಸ್ಥರು

ಚನ್ನಪಟ್ಟಣ:ಮಾ/೨೬/೨೦/ಗುರುವಾರ.ಕೊರೊನಾ ವೈರಸ್ ದಿನೇದಿನೇ ಹೆಚ್ಚಾಗುತ್ತಿರುವುದನ್ನು ನಿಧಾನವಾಗಿ ಅರ್ಥೈಸಿಕೊಳ್ಳುತ್ತಿರುವ ಗ್ರಾಮೀಣ ಭಾಗದ ಯುವಕರು ಆರ

Top Stories »  


Top ↑