Tel: 7676775624 | Mail: info@yellowandred.in

Language: EN KAN

    Follow us :


ಗುರುವಾರ 120 ನಾಮಪತ್ರಗಳು ಸಲ್ಲಿಕೆ

Posted Date: 20 Apr, 2018

ಗುರುವಾರ 120 ನಾಮಪತ್ರಗಳು ಸಲ್ಲಿಕೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಗುರುವಾರ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದ್ದು, ಕದನ ಕಣ ಇನ್ನಷ್ಟು ರಂಗೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಸಚಿವ ಡಿ.ಕೆ.ಶಿವಕುಮಾರ್‌, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ಜೆಡಿಎಸ್‌ನ ಮಧು ಬಂಗಾರಪ್ಪ ಸೇರಿ 135 ಮಂದಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಪ್ರಮುಖ ನಾಯಕರು ನಾಮಪತ್ರ ಸಲ್ಲಿಕೆ ವೇಳೆಯೂ ಸಾವಿರಾರು ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ಕಚೇರಿ ಬಳಿ ತಮ್ಮ ಶಕ್ತಿ ಪ್ರದರ್ಶನ ಮಾಡಿದರು. ಗುರುವಾರ ಒಂದೇ ದಿನ 120 ನಾಮಪತ್ರಗಳು ಸಲ್ಲಿಕೆಯಾಗಿವೆ. ಮೊದಲೆರಡು ದಿನ 35 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇದರೊಂದಿಗೆ ಒಟ್ಟು ನಾಮಪತ್ರಗಳ ಸಂಖ್ಯೆ 155ಕ್ಕೇರಿದೆ.

ಮಂಗಳವಾರದಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದ್ದು, ಮೊದಲ ಎರಡು ದಿನ ಹೆಚ್ಚಿನ ಅಭ್ಯರ್ಥಿಗಳು ನಾಪಮತ್ರ ಸಲ್ಲಿಸಿರಲಿಲ್ಲ. ಆದರೆ, ಮೂರನೇ ದಿನ ಸಾಕಷ್ಟು ಪ್ರಮುಖರು ನಾಮಪತ್ರ ಸಲ್ಲಿಸಿದ್ದು, ಇದರೊಂದಿಗೆ ಚುನಾವಣಾ ಕಣ ಕಾವೇರುವ ಹಂತ ತಲುಪಿದೆ.

ಶಿಕಾರಿಪುರ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಬಿ.ಎಸ್‌.ಯಡಿಯೂರಪ್ಪ ಅವರು ಹುಚ್ಚುರಾಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಛತ್ತೀಸ್‌ಗಡ ಮುಖ್ಯಮಂತ್ರಿ ರಮಣ್‌ ಸಿಂಗ್‌, ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದಗೌಡ, ಸಂಸದರಾದ ಶ್ರೀರಾಮುಲು, ಪಿ.ಸಿ.ಮೋಹನ್‌ ಮತ್ತಿತರರು ಇದ್ದರು. ಶಿವಮೊಗ್ಗ ನಗರದಲ್ಲಿ ಕೆ.ಎಸ್‌.ಈಶ್ವರಪ್ಪ ಅವರು ನಾಮಪತ್ರ ಸಲ್ಲಿಸಿದ್ದು, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಮತ್ತಿತರರು ಸಾಥ್‌ ನೀಡಿದರು.

ಸಚಿವ ಡಿ.ಕೆ.ಶಿವಕುಮಾರ್‌ ಸಂಪ್ರದಾಯದಂತೆ ಕಬ್ಟಾಳಮ್ಮದೇವಿಯ ಆಶೀರ್ವಾದ ಪಡೆದು ಮರಳೇಗವಿಮಠ, ದೇಗುಲಮಠ ಹಾಗೂ ಕುಲದೇವತೆ ಕೆಂಕೇರಮ್ಮ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು. ಸಂಸದ ಹಾಗೂ ಸಹೋದರ ಡಿ.ಕೆ.ಸುರೇಶ್‌, ಪತ್ನಿ ಉಷಾ ಜತೆಗಿದ್ದರು ಪದ್ಮನಾಭನಗರದಲ್ಲಿ ಆರ್‌.ಅಶೋಕ್‌ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದು, ಚಿತ್ರನಟ ಜಗ್ಗೇಶ್‌ ಜತೆಗಿದ್ದರು.

ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸಚಿವ ರಮಾನಾಥ ರೈ, ಕೋಲಾರ ಜಿಲ್ಲೆ ಶ್ರೀನಿವಾಸಪುರದಲ್ಲಿ ಸಚಿವ ಕೆ.ಆರ್‌.ರಮೇಶ್‌ಕುಮಾರ್‌ ಅರಕಲಗೂಡಿನಲ್ಲಿ ಸಚಿವ ಎ.ಮಂಜು, ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಕಾಂಗ್ರೆಸ್‌ನ ಕಿಮ್ಮನೆ ರತ್ನಾಕರ, ಮೂಡಬಿದರೆಯಿಂದ ಮಾಜಿ ಸಚಿವ ಕಾಂಗ್ರೆಸ್‌ನ ಅಭಯಚಂದ್ರ ಜೈನ್‌, ಬಾಗಲಕೋಟೆಯಿಂದ ಮಾಜಿ ಸಚಿವ ಕಾಂಗ್ರೆಸ್‌ನ ಎಚ್‌.ವೈ.ಮೇಟಿ, ಗುರುಮಿಟ್ಕಲ್‌ನಿಂದ ಮಾಜಿ ಸಚಿವ ಕಾಂಗ್ರೆಸ್‌ನ ಬಾಬೂರಾವ್‌ ಚಿಂಚನಸೂರ್‌ ಕೂಡ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಜೆಡಿಎಸ್‌ ಶಾಸಕ ಮಧು ಬಂಗಾರಪ್ಪ ಸೊರಬ ಕ್ಷೇತ್ರದಿಂದ, ಬಿಜೆಪಿಯ ಬಿ.ಎನ್‌.ವಿಜಯಕುಮಾರ್‌ ಜಯನಗರ ಕ್ಷೇತ್ರದಿಂದ, ಕಾಂಗ್ರೆಸ್‌ನ ವಾಸು ಚಾಮರಾಜ ಕ್ಷೇತ್ರದಿಂದ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ವಿಧಾನ ಪರಿಷತ್‌ ಸದಸ್ಯ ಸೋಮಣ್ಣ ಬೇವಿನಮರದ ಶಿಗ್ಗಾವಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದು, ಇವರಲ್ಲದೆ ಹಲವು ಮಾಜಿ ಶಾಸಕರು, ವಿವಿಧ ಪಕ್ಷಗಳ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸಿದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ

ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕ

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ
ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ

ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

Top Stories »  


Top ↑