Tel: 7676775624 | Mail: info@yellowandred.in

Language: EN KAN

    Follow us :


ಎರಡೇ ಗಂಟೆಯಲ್ಲಿ ಅಧಿಕಾರ ತ್ಯಜಿಸಲು ಸಿದ್ಧ : ಕುಮಾರಸ್ವಾಮಿ

Posted Date: 15 Jul, 2018

ಎರಡೇ ಗಂಟೆಯಲ್ಲಿ ಅಧಿಕಾರ ತ್ಯಜಿಸಲು ಸಿದ್ಧ : ಕುಮಾರಸ್ವಾಮಿ

ಬೆಂಗಳೂರು: ನಾನು ಹೋದ ಕಡೆಗಳೆಲ್ಲ ಜನ ಸೇರುತ್ತಾರೆ. ಪ್ರೀತಿ ತೋರಿಸುತ್ತಾರೆ. ಆದರೆ, ಅದೇ ಪ್ರೀತಿಯನ್ನು ಪಕ್ಷದ ಮೇಲೆ ತೋರಿಸುತ್ತಿಲ್ಲ. ಏಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭಾವೋದ್ವೇಗದಿಂದ ಹೇಳಿದರು.

ಪಕ್ಷದ ರಾಜ್ಯಮಟ್ಟದ ಬೂತ್‌ ಘಟಕಗಳ ಕಾರ್ಯಕರ್ತರು ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನೀವೆಲ್ಲರೂ ನಾನು ಮುಖ್ಯಮಂತ್ರಿ ಆಗಿದ್ದಕ್ಕೆ ಸಂತೋಷಪಟ್ಟಿದ್ದೀರಿ. ನನ್ನ ತಂದೆ, ತಾಯಿ ಮಾಡಿದ ಪೂಜೆಯ ಫಲವಾಗಿ ನನಗೆ ಮತ್ತೆ ಅಧಿಕಾರ ಸಿಕ್ಕಿದೆ’ ಎಂದು ಕೆಲಹೊತ್ತು ಮೌನವಾದರು.

‘ಪ್ರಧಾನಿ ಹುದ್ದೆಯನ್ನೇ ಒದ್ದು ಬಂದ ದೇವೇಗೌಡರ ಮಗ ನಾನು. ಮನಸ್ಸು ಮಾಡಿದರೆ ಎರಡೇ ಗಂಟೆಯಲ್ಲಿ ಅಧಿಕಾರದಿಂದ ಕೆಳಗೆ ಇಳಿಯುತ್ತೇನೆ. ದೇವರು ಕೊಟ್ಟ ಈ ಜಾಗದಲ್ಲಿ ದೇವರು ಇಚ್ಛಿಸುವವರೆಗೆ ಇರುತ್ತೇನೆ’ ಎಂದರು.

‘ಕರಾವಳಿಯಲ್ಲಿ ಮೀನುಗಾರ ಮಹಿಳೆಯರಿಂದ ಇಂಗ್ಲಿಷ್‌ನಲ್ಲಿ ‘ಕುಮಾರಸ್ವಾಮಿ ನಮ್ಮ ಮುಖ್ಯಮಂತ್ರಿ‌ ಅಲ್ಲ’ ಎಂದು ಫಲಕ ಕೊಟ್ಟು ಪ್ರತಿಭಟನೆ ಮಾಡಿಸಲಾಗಿದೆ. ಕೊಡಗಿನ ಹುಡುಗನೊಬ್ಬನ ಹೇಳಿಕೆಯನ್ನು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಮಾಡಲಾಗಿದೆ. ಇದರ ಹಿಂದೆ ಬಿಜೆಪಿಯವರ ಹುನ್ನಾರವಿದೆ. ಇದಕ್ಕೆ ನಾನು ಹೆದರುವುದಿಲ್ಲ. ಆ ಭಾಗಗಳಿಗೆ ಹೋಗಿ ಜನರ ಸಮಸ್ಯೆಗಳನ್ನು ಆಲಿಸುತ್ತೇನೆ’ ಎಂದೂ ಮಾತು ಕೊಟ್ಟರು.

‘ಮೊಬೈಲ್ ಬ್ಯಾಂಕ್ ಯೋಜನೆ ಜಾರಿಗೆ ತರುವ ಉದ್ದೇಶವಿದೆ. ನಿತ್ಯ ವ್ಯಾಪಾರ ಮಾಡುವ ಸಣ್ಣ ವ್ಯಾಪಾರಿಗಳಿಗೆ ಬಡ್ಡಿರಹಿತ ಸಾಲ ಕೊಡುವ ಯೋಜನೆ ಜಾರಿಗೆ ತರುವ ಚಿಂತನೆಯೂ ಇದೆ’ ಎಂದ ಕುಮಾರಸ್ವಾಮಿ, ‘ಅನ್ನಭಾಗ್ಯ ಯೋಜನೆಯಲ್ಲಿ ಏಳು ಕಿಲೋ ಅಕ್ಕಿ ಕೊಡಲು ಮತ್ತೆ ₹ 2000 ಕೋಟಿ ಹಣ ಬೇಕು. ಎಲ್ಲಿಂದ ಹಣ ಹೊಂದಿಸಲಿ’ ಎಂದೂ ಪ್ರಶ್ನಿಸಿದರು.

‘ನಿಗಮ ಮಂಡಳಿಗಳಿಗಾಗಿ ಅಂಗಲಾಚಬೇಡಿ. ಪಕ್ಷದ ಪಾಲಿಗೆ ಬರುವ 20-30 ನಿಗಮ ಮಂಡಳಿಗಳಲ್ಲಿ ಎಷ್ಟು ಜನರಿಗೆ ಅಂತ ಕೊಡಲಿ. ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ಬಂದಾಗ ನಾನೇ ನಿಮ್ಮನ್ನು ಗುರುತಿಸುತ್ತೇನೆ. 15 ದಿನಗಳಿಗೊಮ್ಮೆ ಪಕ್ಷದ ಕಚೇರಿಗೆ ಬರುತ್ತೇನೆ’ ಎಂದು ಪಕ್ಷದ ಕಾರ್ಯಕರ್ತರಿಗೆ ಭರವಸೆ ನೀಡಿದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ
ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ

*ಹೊತ್ತಿ ಉರಿದ ಕನಕಪುರ ಮತ್ತು ಸಾತನೂರು,* *ರಾಮನಗರದಲ್ಲಿಯೂ ಉಗ್ರ ಪ್ರತಿಭಟನೆ,* *ಚನ್ನಪಟ್ಟಣ ದಲ್ಲಿ ಹೇಳಿಕೊಳ್ಳುವಂತ ಪ್ರತಿಭಟನೆ* *ಇಲ್ಲಾ, ಮಾಗಡಿಯಲ್ಲಿಯೂ ಸಹ ತಣ್ಣನೆ* *ಪ್ರತಿಭಟನೆ. ರಾಜ್ಯದಾದ್ಯ

ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ
ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ

ಚನ್ನಪಟ್ಟಣ: ನಗರದ ಸಾತನೂರು ಮುಖ್ಯ ರಸ್ತೆಯ ಸುಣ್ಣಘಟ್ಟ ಗ್ರಾಮದ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಟೆಂಪೋ (ಕೆಎ೧೩-ಸಿ

ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ
ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ

ಪಾಂಡವಪುರ: ಗ್ರಾಮದೇವತೆ ದೇವಿರಮ್ಮನ ಹಬ್ಬದ ಆನಂದದಲ್ಲಿ ಮಿಂದೇಳುತ್ತಿದ್ದ ಗ್ರಾಮದ ಭಕ್ತ ವೃಂದದವರಿಗೆ ಬೆಳಗಿನ ಜಾವ ಮೂರು ಗಂಟೆಗೆ ದೇವರ ಮುಂದೆಯೇ ನಡೆದ ಕೊಲೆ ನೆರೆದಿದ್ದ ಸಹಸ್ರಾರು ಭಕ್ತರನ್ನು ಅಧೀರ

Top Stories »  


Top ↑