Tel: 7676775624 | Mail: info@yellowandred.in

Language: EN KAN

    Follow us :


ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ತ್ಯಾಜ್ಯ ನೀರು ಸಂಸ್ಕರಿಸಲು ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪನೆ

Posted Date: 30 Jan, 2018

ಶ್ರವಣಬೆಳಗೊಳ : ಶ್ರವಣಬೆಳಗೊಳದಲ್ಲಿ ಈ ಬಾರಿ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ

ಉಂಟಾಗಬಹುದಾದ ಕೊಳಚೆ ನೀರಿನ ಸಮಸ್ಯೆಯನ್ನು ವೈಜ್ಞಾನಿಕವಾಗಿ ನಿರ್ವಹಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಇಲ್ಲಿ ನಿರ್ಮಾಣವಾಗಿರುವ 12 ತಾತ್ಕಾಲಿಕ ನಗರಗಳಲ್ಲಿನ ಕೊಳಚೆ ನೀರನ್ನು ಶುದ್ಧೀಕರಿಸಲು ಒಂದು ಅತ್ಯಾಧುನಿಕ ಕೊಳಚೆ ನೀರಿನ ಸಂಸ್ಕರಣ ಘಟಕವನ್ನು ಸ್ಥಾಪಿಸಿದೆ.

ಮಹಾಮಸ್ತಕಾಭಿಷೇಕದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುತ್ತಿರುವ ಹಿನ್ನಲೆಯಲ್ಲಿ ಒಳಚರಂಡಿ ನೀರನ್ನು ಶುದ್ಧೀಕರಿಸುವ ಸಲುವಾಗಿ ಮೂವಿಂಗ್ ಬೆಡ್ ಬಯೋಫಿಲ್ಮ್ ರಿಯಾಕ್ಟರ್ ತಂತ್ರಜ್ಞಾನ ಘಟಕವನ್ನು ಶ್ರವಣಬೆಳಗೊಳದಲ್ಲಿ ಅಳವಡಿಸಲಾಗಿದೆ.

ಶ್ರವಣಬೆಳಗೊಳವು ಒಂದು ಗ್ರಾಮ ಪಂಚಾಯಿತಿ ಆಗಿದ್ದು, ಸುಮಾರು 8000 ಜನಸಂಖ್ಯೆಯನ್ನು ಹೊಂದಿರುವ ಈ ಪಟ್ಟಣ ಮಹಾಮಸ್ತಕಾಭಿಷೇಕದ ನಂತರವೂ ಈ ಕೊಳಚೆ ನೀರು ಸಂಸ್ಕರಣಾ ಘಟಕ ಪಟ್ಟಣದ ಕೊಳಚೆ ನೀರು ಸಂಸ್ಕರಿಸಲು ಬಳಕೆಯಾಗುತ್ತದೆ. ಪಟ್ಟಣದ ಜನಸಂಖ್ಯೆ 15000 ಆಗುವವರೆಗೂ ಕೊಳಚೆನೀರು ಶುದ್ಧೀಕರಿಸುವ ಘಟಕದ ಸಾಮರ್ಥ್ಯ ಹೊಂದಿರುತ್ತದೆ.

1993 ರಲ್ಲಿ ನಡೆದ ಹಿಂದಿನ ಮಹಾಸ್ತಕಾಭಿಷೇಕದಲ್ಲಿ ಉಂಟಾದ ಕೊಳಚೆ ನೀರನ್ನು ಸಂಸ್ಕರಣೆ ಮಾಡಿ ಆ ನೀರನ್ನು ಭೂಮಿಗೆ ಇಂಗಿಸುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಹಾಗೆಯೇ 2006 ರ ಮಹಾಮಸ್ತಕಾಭಿಷೇಕದಲ್ಲಿಯೂ ಇದೇ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲಾಗಿತ್ತು ಎಂದು ಮಹಾಸ್ತಕಾಭಿಷೇಕದ ವಿಶೇಷ ಅಧಿಕಾರಿ ವರಾಪ್ರಸಾದ್ ರೆಡ್ಡಿ ಅವರು ತಿಳಿಸಿದ್ದಾರೆ.

ಈ ಘಟಕ 1.5 ಎಂ.ಎಲ್.ಡಿ ಸಾಮರ್ಥ್ಯ ಹೊಂದಿದ್ದು 2.3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಮನೆಗಳಿಂದ ಸಂಗ್ರಹಿಸಲಾದ ಕೊಳಚೆ ನೀರನ್ನು ಒಂದು ಕಡೆ ಸಂಗ್ರಹಿಸಿ ಬಯೋ-ರಿಯಾಕ್ಟರ್ ಗಳಿಗೆ ಪಂಪ್ ಮಾಡಲಾಗುತ್ತದೆ. ಈ ರಿಯಾಕ್ಟರ್ ಗಳು ಒಳಬರುವ ಕೊಳಚೆಯನ್ನು 3ರಿಂದ 4 ಗಂಟೆಗಳಲ್ಲಿ ಸಂಸ್ಕರಿಸುತ್ತವೆ. ರಿಯಾಕ್ಟರ್ ಗಳಿಂದ ಹೊರಬರುವ ವಸ್ತು ಪ್ಲೇಟ್ ಸೆಟ್ಲರ್ ಗೆ ಪ್ರವಹಿಸುತ್ತದೆ ಮತ್ತು ಅಲ್ಲಿ ಪಾಲಿಮರ್ ಸಹಾಯದಿಂದ ಘನ ತ್ಯಾಜ್ಯ ವಿಂಗಡಣೆಯಾಗುತ್ತದೆ. ಪ್ಲೇಟ್ ಸೆಟ್ಲರ್ ನಿಂದ ಹೊರಬರುವ ಸ್ವಚ್ಛ ನೀರು ಪ್ರೆಷರ್ ಸ್ಯಾಂಡ್ ಫಿಲ್ಟರ್ ಮೂಲಕ ಹರಿದು ಉಳಿದ ಯಾವುದೇ ಬಗೆಯ ಘನ ವಸ್ತುಗಳನ್ನು ನಿವಾರಿಸುತ್ತದೆ. ಮತ್ತು ಆಕ್ಟಿವೇಟೆಡ್ ಕಾರ್ಬನ್ ವಾಸನೆ ನಿವಾರಿಸುತ್ತದೆ.

ಅಂತಿಮವಾಗಿ ಕ್ಲೋರಿನ್ ಬಳಸಿ ಕೊಳಚೆ ನೀರಿನ ಸಂಸ್ಕರಣೆಯನ್ನು ಪೂರ್ಣಗೊಳಿಸಲಾಗುತ್ತದೆ. ಹೀಗೆ ಶುದ್ಧೀಕರಿಸಿದ ಕುಡಿಯುವುದಕ್ಕೆ ಹೊರತಾಗಿಸಿ ನೀರು ಕೃಷಿ, ತೋಟಗಾರಿಕೆ, ಶೌಚಾಲಯ, ಸ್ವಚ್ಛತೆಗೆ ಬಳಸಬಹುದಾಗಿದೆ.

"ಕೊಳಚೆ ನೀರು ಶುದ್ಧೀಕರಣ ಘಟಕದ ಬಳಿ ಒಂದು ರಾಕ್ ಗಾರ್ಡ್‌ನ್ ನಿರ್ಮಿಸಲಾಗುವುದು. ಈ ನೀರನ್ನು ಅಲ್ಲಿನ ಸಸ್ಯಗಳಿಗೆ ಬಳಸಲಾಗುವುದು. ಈ ರಾಕ್ ಗಾರ್ಡನ್ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಪ್ರಮುಖ ಆಕರ್ಷಣೆಯಾಗಲಿದೆ"ಎಂದು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದ್ದಾರೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ

ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕ

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ
ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ

ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

Top Stories »  


Top ↑