ಸಾವು ಬದುಕಿನ ಹೋರಾಟದಲ್ಲಿರುವ ರೋಗಿಗಳಿಗೆ ರಕ್ತ ಸಂಜೀವಿನಿ ಇದ್ದಂತೆ ಸಿ ಪುಟ್ಟಸ್ವಾಮಿ

ಚನ್ನಪಟ್ಟಣ: ದಾನ ದಾನಗಳಲ್ಲಿ ರಕ್ತದಾನ ಅತಿ ಶ್ರೇಷ್ಠ ದಾನವಾಗಿದೆ, ಬೇರೆ ರೀತಿಯ ಹಲವಾರು ದಾನಗಳು ತೋರ್ಪಡಿಕೆಗೆ ಅಥವಾ ಅಡಂಬರಕ್ಕೆ ಸೀಮೀತವಾದರೆ, ರಕ್ತದಾನ ಸಾವು ಬದುಕಿನ ಹೋರಾಟದಲ್ಲಿ ತೊಯ್ದಾಡುತ್ತಿರುವ ರೋಗಿಗೆ ಜೀವ ಉಳಿಸಲು ನೆರವಾಗುತ್ತದೆ, ಆ ರಕ್ತ ಪಡೆದ ರೋಗಿಯ ಜೀವದ ಜೊತೆಗೆ ಆತನ ಕುಟುಂಬವೂ ಸಹ ತಮ್ಮ ಕುಡಿಯನ್ನು ಉಳಿಸಿಕೊಂಡಂತಾಗುತ್ತದೆ ಎಂದು ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಹೇಳಿದರು.
ಅವರು ನಗರದ *ಮಾತೃಶ್ರೀ ಆರ್ಥೋಪೆಡಿಕ್ ಮತ್ತು ಟ್ರಾಮಾ ಸೆಂಟರ್* ನಲ್ಲಿ ಏಳನೇ ವರ್ಷದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ತಾಲ್ಲೂಕಿನಲ್ಲಿ ತಮ್ಮ ಸಮಯ ಮತ್ತು ಗಳಿಕೆಯನ್ನು ತಾವೇ ಉಪಯೋಗಿಸಿಕೊಳ್ಳದೇ ಸಮಾಜಕ್ಕೆ ಅರ್ಪಿಸುವ ಮನೋಭಾವ ಇರುವ ವ್ಯಕ್ತಿಗಳಲ್ಲಿ ಡಾ ಮಲವೇಗೌಡ ರ ಹೆಸರು ಮುಂಚೂಣಿಯಲ್ಲಿದೆ, ಕೇವಲ ರಕ್ತದಾನ ಶಿಬಿರವಲ್ಲದೆ, ಗಿಡಗಳನ್ನು ನೆಟ್ಟು ಪೋಷಿಸುವುದು, ಪರಿಸರ ಮಾಲಿನ್ಯದ ಬಗ್ಗೆ ಕಾಳಜಿ ವಹಿಸಿವುದು, ಆರ್ಥಿಕವಾಗಿ ಹಿಂದುಳಿದ ಬಡ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವುದು, ಮತ್ತು ಸೈಕಲ್ ಜಾಥಾ ಹಮ್ಮಿಕೊಳ್ಳುವುದರ ಜೊತೆಗೆ ಸಂಪೂರ್ಣವಾಗಿ ಕನ್ನಡದಲ್ಲಿ ವ್ಯವಹರಿಸುವುದು ಇವರ ಉತ್ತಮ ವ್ಯಕ್ತಿತ್ವವನ್ನು ತೋರಿಸುತ್ತದೆ ಎಂದು ಶ್ಲಾಘಿಸಿದರು.
ಮಾತೃಶ್ರೀ ಆಸ್ಪತ್ರೆಯ ಮುಖ್ಯಸ್ಥ ಹಾಗೂ ರಕ್ತದಾನ ಶಿಬಿರದ ರೂವಾರಿ ಡಾ ಮಲವೇಗೌಡ ಮಾತನಾಡಿ
ವಿಶ್ವದಾದ್ಯಂತ ವಿಜ್ಞಾನ ಎಷ್ಟೇ ಬೆಳೆದು ನಿಂತರೂ ಪ್ರಕೃತಿಯ ಮುಂದೆ ಮನುಜರು ನಗಣ್ಯ.
ಮಾನವನ ದೇಹದ ಬಹುತೇಕ ಎಲ್ಲಾ ಅಂಗಗಳನ್ನು ಕೃತಕವಾಗಿ ಜೋಡಿಸಬಹುದಾದರು ದೇಹಕ್ಕೆ ಬೇಕಾದ ರಕ್ತವನ್ನು ಮಾತ್ರ ಕೃತಕವಾಗಿ ಉತ್ಪಾದಿಸಲು ಆಗುವುದಿಲ್ಲ, ಅದೆಷ್ಟೋ ವಿಜ್ಞಾನಿಗಳು ಕೃತಕ ರಕ್ತ ಸೃಷ್ಟಿಸುವಲ್ಲಿ ಅನುತ್ತೀರ್ಣರಾಗಿದ್ದರೂ ಸಹ ತಮ್ಮ ಪ್ರಯತ್ನವನ್ನು ಬಿಡದೆ ಛಲದಂಕ ಮಲ್ಲರಂತೆ ಪ್ರಯತ್ನ ಮುಂದುವರಿಸಿದ್ದಾರೆ.
ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಾದರೆ ಅಪಘಾತ ಮತ್ತು ಗರ್ಭಿಣಿ ಸ್ತ್ರೀಯರ ಸಾವಿನ ಸಂಖ್ಯೆ ಇಳಿಮುಖವಾಗುತ್ತದೆ, ಆದರೆ ಅದು ಅಸಾಧ್ಯ, ಹಾಗಾಗಿ ಆರೋಗ್ಯವಂತ ಯುವಕರು ರಕ್ತದಾನ ಮಾಡುವುದರ ಮೂಲಕ ರಕ್ತದ ಕೊರತೆಯಿಂದ ಬಳಲುತ್ತಿರುವ ರೋಗಿಗೆ ನೆರವಾಗಬೇಕು ಎಂದರು.
ರಕ್ತದಾನ ಮಾಡಿದ ವ್ಯಕ್ತಿ ಮತ್ತಷ್ಟು ಬಲಿಷ್ಠನಾಗುತ್ತಾನೆ, ರಕ್ತದಾನ ಮಾಡಿದ ಸಂದರ್ಭದಲ್ಲಿ ಯಾವುದೇ ರೀತಿಯ ಸಮಸ್ಯೆ ಬರುವುದಿಲ್ಲ ಎಂದು ಅವರು ತಿಳಿಸಿದರು.
ಶಿಬಿರದಲ್ಲಿ ರೆಡ್ ಕ್ರಾಸ್ ನ ವೈದ್ಯೆ ಡಾ ವರ್ಷಾ ಮತ್ತು ಸಿಬ್ಬಂದಿ, ಮಾತೃಶ್ರೀ ಆಸ್ಪತ್ರೆಯ ಸಿಬ್ಬಂದಿ ವರ್ಗ, ಕರ್ನಾಟಕ ಜಾನಪದ ಪರಿಷತ್ತು ತಾಲ್ಲೂಕು ಅಧ್ಯಕ್ಷ ಗೋ ರಾ ಶ್ರೀನಿವಾಸ, ಸಾಹಿತಿ ವಿಜಯ್ ರಾಂಪುರ ಮತ್ತು ಎಂ ಕುಮಾರ್ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »

ಅಕ್ರಮ ಗ್ರಾನೈಟ್ ಮತ್ತು ಎಂ ಸ್ಯಾಂಡ್ ಜಪ್ತಿ ಮಾಡಿದ ತಹಶಿಲ್ದಾರ್
ಕನಕಪುರ/ಚನ್ನಪಟ್ಟಣ: ಶುಕ್ರವಾರ ಮುಂಜಾನೆ ೧೨:೪೫ ರ ವೇಳೆ ಅಕ್ರಮವಾಗಿ ಗ್ರಾನೈಟ್ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಹಶಿಲ್ದಾರ್ ಸುದರ್ಶನ್ ಮತ

ನಗರಸಭೆ ವ್ಯಾಪ್ತಿಯಲ್ಲಿ ಕೆ ಆರ್ ಐ ಡಿ ಎಲ್ ನಿಂದ ಅರ್ಧಂಬರ್ಧ ಕೆಲಸ, ಸೊಂಟ ಮುರಿದುಕೊಂಡ ಅಂಧ ವೃದ್ಧ.
ಚನ್ನಪಟ್ಟಣ: ನಗರದ ಮಹಾತ್ಮ ಗಾಂಧಿ ರಸ್ತೆಯ ಐದು ದೀಪಗಳ (ಡೂಂಲೈಟ್ ಸರ್ಕಲ್) ವೃತ್ತ ದ ಚರಂಡಿ ಮತ್ತು ರಸ್ತೆಯ ಕಾಮಗಾರಿಯನ್ನು ಪ್ರಾರಂಭಿಸಿದ ಕೆ ಆ

ಆರ್ ಜೆ ಎಸ್ ಪಿಯು ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ
ಚನ್ನಪಟ್ಟಣ: ಬೆಂಗಳೂರಿನ ಕೋರಮಂಗಲ್ಲಿರುವ ಆರ್ ಜೆ ಎಸ್ ಪದವಿ ಪೂರ್ವ ಕಾಲೇಜಿನ ಶಿಬಿರಾರ್ಥಿಗಳು ನಗರದಲ್ಲಿರುವ ಶಿಕ್ಷಣಾಧಿಕಾರಿಗಳ ಕಛೇರಿ ಆವರಣವನ

ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಲಕ್ಷಾಂತರ ರೂ ವಸ್ತು ಕಳವು
ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿರುವ ಪ್ರತಿನಿತ್ಯ ಸಹಸ್ರಾರು ಮಂದಿ ಓಡಾಡುವ ಸಾರ್ವಜನಿಕ ಆಸ್ಪತ್ರೆಯ ಆವರಣದ ಆಂಬುಲೆನ್ಸ್ ವಾಹನ ನಿಲುಗಡೆಯ ಗೋಡ

ಸುದ್ದಿ ಎಫೆಕ್ಟ್ ನಕಲಿ ಬಾಬಾ ಆರೆಸ್ಟ್
ಚನ್ನಪಟ್ಟಣ: ಸಾಯಿಬಾಬಾ ನ ಪುನರವತಾರ ಪ್ರೇಮಸಾಯಿ ಎಂದು ನಗರದೆಲ್ಲೆಡೆ ಓಡಾಡಿಕೊಂಡು ಅಂಧ ಭಕ್ತರಿಗೆ ಜಾದೂ ಮೂಲಕ ಭಸ್ಮ ನೀಡಿ ದೇವಾತೀಥ್ಯ ಸ್ವೀಕರಿ

ಭಾನುವಾರ ತಾಲೂಕು ಬ್ರಾಹ್ಮಣ ಮಹಾಸಭಾ ಉದ್ಘಾಟನೆ
ಚನ್ನಪಟ್ಟಣ: ತಾಲೂಕಿನಲ್ಲಿ ಇದೇ ಮೊದಲಬಾರಿಗೆ ಅಸ್ಥಿತ್ವಕ್ಕೆ ಬಂದಿರುವ ಬ್ರಾಹ್ಮಣ ಮಹಾಸಭಾದ ಉದ್ಘಾಟನೆಯನ್ನು ತ್ರಿಮಸ್ಥ ಯತಿಗಳ ಅಮೃತ ಹಸ್ತದಿಂದ

ದೂರು ಮತ್ತು ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಕೊಳಚೆ ನೀರಿಗೆ ತಾತ್ಕಾಲಿಕ ರಿಲೀಫ್
ಚನ್ನಪಟ್ಟಣ: ಮಾರುತಿ ಬಡಾವಣೆಯಲ್ಲಿ ಕೊಳಚೆ ನೀರು ಹರಿಯುತಿದ್ದು ಮನೆಗಳಿಗೆ ನುಗ್ಗುತಿದ್ದರ ಬಗ್ಗೆ ಅಲ್ಲಿಯ ನಿವಾಸಿಗಳು ನಗರಸಭೆಗೆ ದೂರು ನೀಡಿದ್ದ

ಡಾ. ಚನ್ನಣ್ಣ ವಾಲೀಕರಾರವರಿಗೆ ಶ್ರದ್ಧಾಂಜಲಿ ಸಭೆ
ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರಾಮನಗರದ ಸ್ಪೂರ್ತಿ ಭವನದಲ್ಲಿ ದಿನಾಂಕ 30ರ ಶನಿವಾರ ಬೆಳಿಗ್ಗೆ 10 ಗಂಟಗೆ ಈಚೆಗೆ ನಿಧನರಾದ ಬಂಡಾಯದ ದನಿ, ಜನಪರ, ಜೀವಪರ ಹೋರಾಟದ ಮುಂಚೂಣಿ ನಾಯಕ ಡಾ. ಚನ್ನಣ್ಣ ವಾಲೀ

ಕಟ್ಟಿದ ಮೋರಿ ಮಾರುತಿ ಮತ್ತು ಅನ್ನಪೂರ್ಣೇಶ್ವರಿ ಬಡಾವಣೆ ಕೊಳಚೆ ನೀರು ಮನೆ ಮತ್ತು ಹೆದ್ದಾರಿಗೆ
ಚನ್ನಪಟ್ಟಣ:ನ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಿಸುತ್ತಿರುವ ಬೆಂಗಳೂರು ಮೈಸೂರು ಹೆದ್ದಾರಿಯ ರಸ್ತೆಯ ವಿಳಂಬದಿಂದ ಹಾಗೂ ರಸ್ತೆ ಕಾಮಗಾ
ಪ್ರತಿಕ್ರಿಯೆಗಳು