Tel: 7676775624 | Mail: info@yellowandred.in

Language: EN KAN

    Follow us :


ಪಂಜಾಬ್ ಕಿಂಗ್ಸ್ ಇಲೆವೆನ್ ತಂಡಕ್ಕೆ ಜಯ

Posted Date: 09 Apr, 2018

ಮೊಹಾಲಿ: ಅತಿ ವೇಗದ ಅರ್ಧ ಶತಕ ಬಾರಿಸಿದ ಕನ್ನಡಿಗ ಲೋಕೇಶ್ ರಾಹುಲ್ ಹಾಗೂ ಕರುಣ್ ನಾಯರ್ ಅವರ ಬ್ಯಾಟಿಂಗ್ ಅಬ್ಬರಕ್ಕೆ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಬೆಚ್ಚಿತು. ಭಾನುವಾರ ನಡೆದ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ಆರು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್ ಇಲೆವನ್ ತಂಡ ಶುಭಾರಂಭ ಮಾಡಿತು.

ಇಲ್ಲಿನ ಐಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ನಿಗದಿತ ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಇನ್ನೂ ಏಳು ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು 167 ರನ್ ಬಾರಿಸಿ ಗೆಲುವಿನ ಮಂದ ಹಾಸ ಬೀರಿತು.

  ಮಿಂಚಿನ ಸಂಚಾರ ನಡೆಸಿದ ರಾಹುಲ್ ಕೇವಲ 15 ಎಸೆತಗಳಲ್ಲಿ ಸಿಕ್ಸರ್ ಮಳೆ ಸುರಿಸಿ ವೇಗದ ಅರ್ಧ ಶತಕ ಸಿಡಿಸಿ ದಾಖಲೆ ಬರೆದರು. ಆದರೆ ಟ್ರೆಂಟ್ ಬೌಲ್ಟ್ ಬೌಲಿಂಗ್‌ನಲ್ಲಿ ದೊಡ್ಡ ಹೊಡೆತಕ್ಕೆ ಶಮಿಗೆ ಕ್ಯಾಚಿತ್ತರು. ಮಯಾಂಕ್ ಅಗರ್‌ವಾಲ್(7)ಗೆ ಮೋರಿಸ್ ನಿರಾಸೆ ಮೂಡಿಸಿದರು. ಉತ್ತಮ ಪ್ರದರ್ಶನ ಮುನ್ಸೂಚನೆಯಲ್ಲಿದ್ದ ಯುವರಾಜ್ ಸಿಂಗ್ ಅವರನ್ನು ರಾಹುಲ್ ತೇವಾಟಿಯಾ ಪೆವಿಲಿಯನ್‌ಗೆ ಅಟ್ಟಿದರು. ನಾಲ್ಕನೇ ಕ್ರಮಾಂಕದಲ್ಲಿ ಬಂದ ಕರುಣ್ ನಾಯರ್ ಬಿರುಸಿನ ಬ್ಯಾಟಿಂಗ್ ನಡೆಸಿದರು. ಅವರು 33 ಎಸೆತಗಳಲ್ಲಿ 5 ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ನೆರವಿನಿಂದ ಅರ್ಧ ಶತಕ ಸಿಡಿಸಿ ತಂಡವನ್ನು ಗೆಲುವಿನ ಸಮೀಪಕ್ಕೆ ತಂದರು. ಕ್ರಿಸ್ಟಿಯನ್ ಔಟ್ ಮಾಡಿದರು. ನಂತರ ಡೇವಿಡ್ ಮಿಲ್ಲರ್(24) ಮತ್ತು ಮಾರ್ಸ್ ಸ್ಟೊಯಿನೀಸ್(22) ಸೇರಿ ತಂಡವನ್ನು ದಡ ಮುಟ್ಟಿಸಿದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in sports »

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ

ಲೀಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗಳಿಂದ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ. 

ಟಾಸ್ ಸೋತು

ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್
ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್

ಮಾಸ್ಕೋ(ರಷ್ಯಾ): ತೀವ್ರ ಕುತೂಹಲ ಮೂಡಿಸಿದ್ದ ಫಿಫಾ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. 

ಫೈನಲ್

ಭಾರತದ ವಿರುದ್ಧ ಇಂಗ್ಲೆಂಡ್ ಗೆ ಜಯ
ಭಾರತದ ವಿರುದ್ಧ ಇಂಗ್ಲೆಂಡ್ ಗೆ ಜಯ

ಲಾರ್ಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾದ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 86 ರನ್ ಗಳಿಂದ ಜಯ ಗಳಿಸಿದೆ.  

ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆದ ಎರಡನ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ
ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ನಾಟಿಂಗ್ ಹ್ಯಾಮ್: ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಇಂಗ್ಲೆಂಡ್ ನೀಡಿದ್ದ 269 ರನ್ ಗ

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ನಾಲ್ಕು ರನ್ ಜಯ

ನವದೆಹಲಿ: ಐಪಿಎಲ್​ ಟಿ20 ಪಂದ್ಯಾವಳಿಯಲ್ಲಿ ಕಿಂಗ್ಸ್​ ಇಲೆವೆನ್​ ಪಂಜಾಬ್​ ತಂಡ ಡೆಲ್ಲಿ ಡೇರ್​ ಡೆವಿಲ್ಸ್​ ವಿರುದ್ಧ ನಾಲ್ಕು ರನ್ ಗಳ ಗೆಲುವು ದಾಖಲಿಸಿದೆ.

ಇಂದು ಫಿರೋಜ್​ ಷಾ ಕೋಟ್ಲಾ ಮೈದಾನದಲ್ಲಿ ನ

ಆರ್ ಸಿ ಬಿ ತಂಡಕ್ಕೆ ಜಯ

ಬೆಂಗಳೂರು: ಎಬಿಡಿ ವಿಲಿಯರ್ಸ್ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(ಆರ್ ಸಿಬಿ) ತಂಡ ಡೆಲ್ಲಿ ಡೇರ್​ ಡೆವಿಲ್ಸ್​ ವಿರುದ್ಧ ಆರು ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.  

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ 9 ವಿಕೆಟ್‌ಗಳ ಜಯ

ಕೋಲ್ಕತಾ: ಹೊಡಿಬಡಿ ದಾಂಡಿಗ ಕ್ರಿಸ್​ ಗೇಲ್​ ಹಾಗೂ ಕನ್ನಡಿಗ ಕೆ ಎಲ್​ ರಾಹುಲ್​ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ಕಿಂಗ್ಸ್​ ಇಲೆವೆನ್​ ಪಂಜಾಬ್​,  ಕೋಲ್ಕತ ನೈಟ್​ ರೈಡರ್ಸ್​ ವಿರುದ್ಧ 9 ವಿಕೆಟ್ ಗಳ ಭ

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ 9 ವಿಕೆಟ್‌ಗಳ ಜಯ

ಕೋಲ್ಕತಾ: ಹೊಡಿಬಡಿ ದಾಂಡಿಗ ಕ್ರಿಸ್​ ಗೇಲ್​ ಹಾಗೂ ಕನ್ನಡಿಗ ಕೆ ಎಲ್​ ರಾಹುಲ್​ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ಕಿಂಗ್ಸ್​ ಇಲೆವೆನ್​ ಪಂಜಾಬ್​,  ಕೋಲ್ಕತ ನೈಟ್​ ರೈಡರ್ಸ್​ ವಿರುದ್ಧ 9 ವಿಕೆಟ್ ಗಳ ಭ

ಕ್ರಿಸ್ ಗೇಲ್ ಶತಕ : ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ
ಕ್ರಿಸ್ ಗೇಲ್ ಶತಕ : ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ

ಮೊಹಾಲಿ: ಮೊಹಾಲಿಯಲ್ಲಿ ಗುರುವಾರ  ನಡೆದ ಕಿಂಗ್ಸ್​ ಇಲೆವೆನ್​ ಪಂಜಾಬ್​ ಮತ್ತು ಸನ್​ ರೈಸರ್ಸ್​ ಹೈದರಾಬಾದ್​ ನಡುವಿನ ಐಪಿಎಲ್​ ಟಿ20 ಪಂದ್ಯದಲ್ಲಿ ಪಂಜಾಬ್​ ತಂಡ 15 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ

ಮೊಹಾಲಿ: ಮೊಹಾಲಿಯಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ನಾಲ್ಕು ರನ್ ಗಳ ರೋಚಕ ಜಯ ಸಾಧಿಸಿದೆ.

ಪಂಜಾಬ್ ನೀಡಿದ್ದ 197 ರನ್

Top Stories »  


Top ↑