Tel: 7676775624 | Mail: info@yellowandred.in

Language: EN KAN

    Follow us :


ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

Posted Date: 21 Sep, 2019

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.


ಹುಣಸೂರು ಕ್ಷೇತ್ರದಲ್ಲಿ ಸಾಕಷ್ಟು ತ್ಯಾಗ ಮಾಡಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ಈ ಕ್ಷೇತ್ರ ಗೆಲ್ಲಿಸಿ ಕೊಳ್ಳಲು ಹೆಚ್ಚಿನ ಸಮಯಾವಕಾಶ ನೀಡುವುದಾಗಿ ತಿಳಿಸಿದ್ದಾರೆ.


ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ ಹೆಚ್.ಡಿ ಕುಮಾರಸ್ವಾಮಿ  ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಗಿಂತ ಮೊದಲ ಶತ್ರು ಜೆಡಿಎಸ್ ಪಕ್ಷ, ಆದರೆ ಕಾಂಗ್ರೆಸ್ ಜೆಡಿಎಸ್ ಪಕ್ಷದ ಜಗಳದಿಂದ ಬಿಜೆಪಿಗೆ ಸಹಕಾರಿಯಾಗುವುದಿಲ್ಲ.


ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಜೊತೆಯ ಹದಿನಾಲ್ಕು ತಿಂಗಳ ನನ್ನ ಸರ್ಕಾರ ಅತ್ಯಂತ ಕೆಟ್ಟ ಸರ್ಕಾರ, ಆದರೂ ರೈತರ ಸಾಲಮನ್ನಾ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಯಾರಿಗೂ ಮೋಸ ಮಾಡಿಲ್ಲ ಎಂದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑