Tel: 7676775624 | Mail: info@yellowandred.in

Language: EN KAN

    Follow us :


ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ

Posted Date: 04 Apr, 2020

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ

ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನಕ್ಕೆ ಒಳಪಡುವ ಜಿಲ್ಲಾ ಆಸ್ಪತ್ರೆಗಳು ಹಾಗೂ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ನಿಭಾಯಿಸಲು ಗರಿಷ್ಠ ೬ ತಿಂಗಳ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮೋದನೆ ನೀಡಿರುತ್ತದೆ.


ಜಿಲ್ಲೆಯಲ್ಲಿ ವೈದ್ಯರು/ತಜ್ಞ ವೈದ್ಯರು ೧೦ ಹುದ್ದೆ ಮಾಹೆಯ ವೇತನ ರೂ.೬೦.೦೦೦/-, ಶುಶ್ರೂಷಕರು ೨೦ ಹುದ್ದೆ ಮಾಹೆಯ ವೇತನ ರೂ. ೨೦.೦೦೦/-, ಪ್ರಯೋಗ ಶಾಲಾ ತಜ್ಞರು ೦೫ ಹುದ್ದೆ ಮಾಹೆಯ ವೇತನ ರೂ.೧೫.೦೦೦/-, ಗ್ರೂಪ್‌ ಡಿ-೧೦ ಹುದ್ದೆ ಮಾಹೆಯ ವೇತನ ರೂ.೧೨.೦೦೦/-, ನೀಡಿ ನೇಮಕ ಮಾಡಿಕೊಳ್ಳಲಾಗುತ್ತದೆ.


ಆಸಕ್ತರು ದಿನಾಂಕ ೦೮.೦೪.೨೦೨೦ ರಂದು ಬೆಳಗ್ಗೆ ೧೦.೩೦ ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳ ಕಚೇರಿ ರಾಮನಗರ ಇಲ್ಲಿ ನಡೆಯಲಿರುವ ಸಂದರ್ಶನಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑