Tel: 7676775624 | Mail: info@yellowandred.in

Language: EN KAN

    Follow us :


ಸುವಿದ್ಯಾ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟ

Posted Date: 05 May, 2020

ಸುವಿದ್ಯಾ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟ

ಚನ್ನಪಟ್ಟಣ:ಮೇ /೦೫/೩೦/ಮಂಗಳವಾರ. ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶವು ಇಂದು ಪ್ರಕಟವಾಗಿದೆ. ಕರ್ನಾಟಕದಾದ್ಯಂತ ಲಾಕ್‌ಡೌನ್ ಆಗಿರುವ ಹಿನ್ನೆಲೆಯಲ್ಲಿ ಸುವಿದ್ಯಾ ವೆಬ್ ಸೈಟ್‌ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.


ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾ ರ್ಥಿಗಳು Suvidya ವೆಬ್‌ಸೈಟ್‌ನಲ್ಲಿ ಫಲಿತಾಂಶ ವನ್ನು ವೀಕ್ಷಿಸಬಹುದು. ಹಾಗೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ನಂಬರ್‌ಗಳಿಗೆ ಕೂಡ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳಲ್ಲಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಗುಂಪು ಸೇರುವ ಸಾಧ್ಯತೆ ಇರುವುದರಿಂದ ಸುವಿದ್ಯಾ ವೆಬ್ ಪೋರ್ಟಲ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು.

ಲಾಕ್‌ಡೌನ್‌ನಿಂದಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳು ಸೇರಿದಂತೆ ಎಲ್ಲಾ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಹೈಸ್ಕೂಲ್‌ವರೆಗಿನ ಪರೀಕ್ಷೆಗಳನ್ನು ರದ್ದುಪಡಿಸಲಾಗಿದ್ದು, ಎಲ್ಲ ವಿದ್ಯಾರ್ಥಿಗಳನ್ನು ಸಾಮೂಹಿಕವಾಗಿ ತೇರ್ಗಡೆಗೊಳಿಸಲಾಗಿದೆ. ಇದೆಲ್ಲದರ ನಡುವೆ ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.


ಗೋ ರಾ ಶ್ರೀನಿವಾಸ..

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑