Tel: 7676775624 | Mail: info@yellowandred.in

Language: EN KAN

    Follow us :


ಹೂವು ಬೆಳೆಗಾರರಿಗೆ ಪರಿಹಾರಧನ: ಮೇ ೨೬ ರೊಳಗಾಗಿ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ*

Posted Date: 14 May, 2020

ಹೂವು ಬೆಳೆಗಾರರಿಗೆ ಪರಿಹಾರಧನ: ಮೇ ೨೬ ರೊಳಗಾಗಿ ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ*

ರಾಮನಗರ:ಮೇ/೧೪/೨೦/ಗುರುವಾರ. ಕೊರೊನಾ (ಕೋವಿಡ್-೧೯) ನಿಂದಾಗಿ ರಾಜ್ಯದಲ್ಲಿ ೨೦೨೦ ಮಾರ್ಚ್ ತಿಂಗಳಿನಿಂದ ಲಾಕ್ ಡೌನ್ ಮಾಡಿರುವ  ಹಿನ್ನೆಲೆಯಲ್ಲಿ ಎಲ್ಲಾ ದೇವಾಲಯಗಳು ಮುಚ್ಚಿದ್ದು, ಹಬ್ಬ, ಮದುವೆ, ಸಭೆ ಸಮಾರಂಭಗಳು ಹಾಗೂ ಮತ್ತಿತರೆ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗಿರುತ್ತದೆ. ಹೂವಿನ ಬೆಳೆಗಳಿಗೆ ಬೇಡಿಕೆ ಇಲ್ಲದ ಕಾರಣ ಹೂ ಬೆಳೆಗಾರರು ತಾವು ಬೆಳೆದಂತಹ ಹೂಗಳನ್ನು ಕಟಾವು ಮಾಡದೆ ಬೆಳೆ ಹಾನಿಯಾಗಿರುತ್ತದೆ. ಈ ಹಿನ್ನಲೆಯಲ್ಲಿ ೨೦೨೦-೨೧ ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಹೂವು ಬೆಳೆಗಾರರಿಗೆ ಪರಿಹಾರಧನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ತಿಳಿಸಿದ್ದಾರೆ.


ಹೂವಿನ ಬೆಳೆಗಾರರಿಗೆ ಪರಿಹಾರಧನ ಕಾರ್ಯಕ್ರಮದಡಿ ಪ್ರತಿ ಫಲಾನುಭವಿಗೆ ಗರಿಷ್ಠ ೧ ಹೆಕ್ಟೇರ್ ಪ್ರದೇಶಕ್ಕೆ ರೂ ೨೫,೦೦೦/- ಮೀರದಂತೆ ಪರಿಹಾರಧನವನ್ನು ನೀಡಲಾಗುವುದು. ಬಹುವಾರ್ಷಿಕ  ಹಾಗೂ ವಾರ್ಷಿಕ ಹೂ ಬೆಳೆಗಳಿಗೆ ೨೦೧೯ ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆ ಆಧರಿಸಿ ಸಹಾಯಧನ ನೀಡಲಾಗುವುದು.


ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆಯಲ್ಲಿನ ಪಟ್ಟಿಯಲ್ಲಿ ಹೆಸರಿಲ್ಲದ ಹೂ ಬೆಳಗಾರರು ನಿಗಧಿತ ಅರ್ಜಿ ನಮೂನೆ, ಪಹಣಿ, ಬ್ಯಾಂಕ್ ಖಾತೆ ಪುಸ್ತಕ ಮತ್ತು ಸ್ವಯಂ ದೃಢೀಕರಣ ಘೋಷಣಾ ಪತ್ರದೊಂದಿಗೆ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಗೆ ಮೇ ೨೬ ರೊಳಗಾಗಿ ಅರ್ಜಿ ಸಲ್ಲಿಸುವುದು. ೨೪ ನೇ ಮಾರ್ಚ್ ೨೦೨೦ ರ ನಂತರ ನಾಟಿ ಮಾಡಿರುವ ಹೂ ಬೆಳೆಗಾರರಿಗೆ ಪರಿಹಾರ ನೀಡಲು ಅವಕಾಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑