Tel: 7676775624 | Mail: info@yellowandred.in

Language: EN KAN

    Follow us :


ನೇಕಾರರ ಸಮ್ಮಾನ್ ಹೊಸ ಯೋಜನೆ : ನೇಕಾರರಿಗೆ ವಾರ್ಷಿಕ ಎರಡು ಸಾವಿರ ರೂ.ಗಳ ಸಹಾಯಧನ

Posted Date: 15 May, 2020

ನೇಕಾರರ ಸಮ್ಮಾನ್ ಹೊಸ ಯೋಜನೆ : ನೇಕಾರರಿಗೆ ವಾರ್ಷಿಕ ಎರಡು ಸಾವಿರ ರೂ.ಗಳ ಸಹಾಯಧನ

ರಾಮನಗರ:ಮೇ/೧೫/೨೦/ಶುಕ್ರವಾರ.ಕೈಮಗ್ಗ ಮತ್ತು ಜವಳಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಮಗ್ಗ ನೇಕಾರಿಕೆಯ ರೇಷ್ಮೆ, ಹತ್ತಿ, ಉಣ್ಣೆ ಇತರೆ ಕೈಮಗ್ಗ ಉತ್ಪನ್ನಗಳನ್ನು ತಯಾರಿಸುತ್ತಿರುವ ನೇಕಾರರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರವು ನೇಕಾರರ ಸಮ್ಮಾನ್ ಯೋಜನೆಯನ್ನು ರೂಪಿಸಿರುತ್ತದೆ.


ಈ ಯೋಜನೆಯಡಿ ಕೈಮಗ್ಗ ನೇಕಾರರಿಗೆ ವಾರ್ಷಿಕವಾಗಿ ರೂ.೨,೦೦೦/- ಗಳನ್ನು ನೀಡಲು ಉದ್ದೇಶಿಸಲಾಗಿರುತ್ತದೆ. ಈ ಯೋಜನೆಯಡಿ ನೇಕಾರರಿಗೆ ಸೌಲಭ್ಯಗಳನ್ನು ನೇರವಾಗಿ ತಲುಪಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಕೈಗೊಂಡಿರುವ ೪ ನೇ ರಾಷ್ಟ್ರೀಯ ಕೈಮಗ್ಗ ಗಣತಿಯ ಪ್ರಕಾರ ಕೈಮಗ್ಗ ಕುಟುಂಬಗಳಿರುವ ಅವಲಂಬಿತ ನೇಕಾರರನ್ನು ಗುರುತಿಸಿ ಈ ಯೋಜನೆಯನ್ನು ಅನುಷ್ಟಾನಗೊಳಿಸಲಾಗುವುದು.


ಈ ಯೋಜನೆಯಡಿ ಅನುದಾನವನ್ನು ನೇರವಾಗಿ ನೇಕಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲು ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯು ಕಡ್ಡಾಯವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಜಿಲ್ಲೆಯಲ್ಲಿರುವ ನೊಂದಾಯಿತ ಕೈಮಗ್ಗ ನೇಕಾರರ ಸಹಕಾರ ಸಂಘಗಳನ್ನು ಸಂಪರ್ಕಿಸಿ ಸೂಕ್ತ ಮಾಹಿತಿ ಪಡೆದುಕೊಳ್ಳಲು ನೇಕಾರರಿಗೆ ತಿಳಿಸಲಾಗಿದೆ.


ಯೋಜನೆಯ ಸೌಲಭ್ಯ ಪಡೆಯಲು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೇ ಹಾಗೂ ಗಾಳಿಮಾತಿಗೆ ಮಾನ್ಯತೆ ನೀಡದೆ ಇಲಾಖೆಯಿಂದ ಅಧಿಕೃತ ಮಾಹಿತಿಯನ್ನು ನೇರವಾಗಿ ಪಡೆಯಲು ಜಿಲ್ಲೆಯ ನೇಕಾರರಿಗೆ ತಿಳಿಸಲಾಗಿದೆ.

ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಭವನ ಬಿ.ಎಂ ರಸ್ತೆ, ರಾಮನಗರ ಜಿಲ್ಲೆ, ದೂ. ಸಂಖ್ಯೆ; 080 27272288 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑