Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ ಜಿಲ್ಲಾಧಿಕಾ

Posted Date: 18 May, 2020

ರಾಮನಗರ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ ಜಿಲ್ಲಾಧಿಕಾ

ರಾಮನಗರ;ಮೇ/೧೮/೨೦/ಸೋಮವಾರ. ರಾಮನಗರ ಜಿಲ್ಲೆಯಾದ್ಯಂತ ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಸಿ.ಆರ್.ಪಿ.ಸಿ ೧೯೭೩ ಕಲಂ ೧೪೪ (೧೦) ರ ಅಡಿಯಲ್ಲಿ ರಾಮನಗರ ಜಿಲ್ಲೆಯಾದ್ಯಂತ ದಿನಾಂಕ: ೧೭-೦೫-೨೦೨೦ ರಿಂದ ೩೧-೦೫-೨೦೨೦ ರ ಮಧ್ಯರಾತ್ರಿಯವರೆಗೆ ಕೇಂದ್ರ ಗೃಹ ಮಂತ್ರಾಲಯದಿಂದ ಹೊರಡಿಸಿರುವ ಆದೇಶಗಳನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ  ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಆದೇಶ ಹೊರಡಿಸಿದ್ದಾರೆ.


ನಿಷೇಧಾಜ್ಞೆಯ ಅವಧಿಯಲ್ಲಿ ಅಂದರೆ ರಾತ್ರಿ ೦೭ ಗಂಟೆಯಿಂದ ಬೆಳಿಗ್ಗೆ ೦೭ ಗಂಟೆಯವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಸಾರ್ವಜನಿಕರ ಅನಗತ್ಯ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಿ ಹಾಗೂ ಎ.ಪಿ.ಎಂ.ಸಿ ಮಾರುಕಟ್ಟೆ ಮತ್ತು ರೇಷ್ಮೆ ಮಾರುಕಟ್ಟೆಗಳಿಗೆ ವಿನಾಯಿತಿ ನೀಡಲಾಗಿದೆ.

ಕೇಂದ್ರ ಗೃಹ ಮಂತ್ರಾಲಯದಿಂದ ಹಾಗೂ ರಾಜ್ಯ ಸರ್ಕಾರದ ವಿನಾಯಿತಿ ನೀಡಲಾಗಿರುವ ಸೇವೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಸಂಸ್ಥೆಗಳು/ಸಿಬ್ಬಂದಗಳು ಕೋವಿಡ್-೧೯ ವೈರಾಣು ಸೋಂಕು ಹರಡದಂತೆ ಮುನ್ನೆಚ್ಚರಿಕೆಗೆ ಕ್ರಮಗಳನ್ನು ವಹಿಸುವುದು ಹಾಗೂ ಆರೋಗ್ಯ ಇಲಾಖೆಯು ಕಾಲಕಾಲಕ್ಕೆ ಹೊರಡಿಸಿರುವ ಸಲಹೆ ಸೂಚನೆಗಳಂತೆ ಅಗತ್ಯ ಕ್ರಮಗಳನ್ನು ವಹಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


ಯಾವುದೇ ವ್ಯಕ್ತಿ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ರ ಕಲಂ ೫೧ ರಿಂದ ೬೦ ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಕಲಂ ೧೮೮ ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಜಿಲ್ಲಾಧಿಕಾರಿ ಎಂ ಎಸ್ಅರ್ಚನಾ ರವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑