Tel: 7676775624 | Mail: info@yellowandred.in

Language: EN KAN

    Follow us :


ಹದಿನೈದು ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಸಮಾಧಿ ಅಭಿವೃದ್ಧಿ, ಡಾ ಅಶ್ವಥನಾರಾಯಣ

Posted Date: 22 May, 2020

ಹದಿನೈದು ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಸಮಾಧಿ ಅಭಿವೃದ್ಧಿ, ಡಾ ಅಶ್ವಥನಾರಾಯಣ

ರಾಮನಗರ:ಮೇ/೨೨/೨೦/ಶುಕ್ರವಾರ. ಮಾಗಡಿ ತಾಲ್ಲೂಕಿನ ಕೆಂಪಾಪುರದಲ್ಲಿರುವ ನಾಡಪ್ರಭು ಕೆಂಪೇಗೌಡರ ಸಮಾಧಿಯನ್ನು ಹದಿನೈದು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ &ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ಅವರು ತಿಳಿಸಿದರು.


ಅವರು ಇಂದು ಕೆಂಪಾಪುರದಲ್ಲಿರುವ ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿ ಕೆಂಪೇಗೌಡರ ಸಮಾಧಿ ಅಭಿವೃದ್ಧಿಗೆ ಎಂಟು ಎಕರೆ ಜಮೀನು ಬೇಕಿದ್ದು, ಇದನ್ನು ಭೂಸ್ವಾಧೀನ ಮಾಡುವ ಕೆಲಸ ಪ್ರಾರಂಭಿಸಲಾಗುವುದು. ರೈತರಿಗೂ ಸಹ ಅನುಕೂಲವಾಗುವಂತೆ ಸುಸಜ್ಜಿತವಾಗಿ ಕೆಂಪಾಪುರದ ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುವುದು.


ಕೆಂಪಾಪುರದಲ್ಲಿರುವ ಕೆರೆಯ ಅಭಿವೃದ್ಧಿಗೂ ಹನ್ನೆರಡು ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ನೀಲಿನಕ್ಷೆ ಕೂಡ ಸಿದ್ಧಪಡಿಲಾಗಿದ್ದು, ಗ್ರಾಮಸ್ಥರು ಸಹಕಾರ ನೀಡಿದರೆ ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದರು.


ಸರ್ಕ್ಯೂಟ್ ನೆಟ್‌ವರ್ಕ್: ನಾಡಪ್ರಭು ಕೆಂಪೇಗೌಡರ ಕೆಲಸ ಮಾಡಿದ ದುರ್ಗ, ಕೆರೆ, ದೇವಸ್ಥಾನಗಳ ಸರ್ಕ್ಯೂಟ್ ನೆಟ್‌ವರ್ಕ ಸಹ ಸಿದ್ಧಪಡಿಸಲಾಗುವುದು ಎಂದರು.


*೧೦೮ ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ:*


ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸರ್ದಾರ್ ವಲ್ಲಾಬಾಯಿ ಪ್ರತಿಮೆಯ ರೀತಿಯಲ್ಲೇ ೧೦೮ ಅಡಿ ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ೨೩ ಎಕರೆಯ ವಿಸ್ತೀರ್ಣದಲ್ಲಿ ವಿಮಾನ ನಿಲ್ದಾಣದ ಮೂರು ಟರ್ಮಿನಲ್ ಸೇರುವ ಸ್ಥಳದಲ್ಲಿ ೬೬ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಜೂನ್ ೨೭ ರಂದು ಕೆಂಪೇಗೌಡರ ಜಯಂತಿ ದಿನದಂದು ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑